Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:3 - ಕನ್ನಡ ಸತ್ಯವೇದವು J.V. (BSI)

3 ಅವರು ನಿನ್ನ ಪ್ರಜೆಗಳಿಗೆ ವಿರೋಧವಾಗಿ ಒಳಸಂಚು ಮಾಡಿ ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:3
12 ತಿಳಿವುಗಳ ಹೋಲಿಕೆ  

ದುಷ್ಟರ ಒಳಸಂಚಿಗೂ ಕೆಡುಕರ ದೊಂಬಿಗೂ ಸಿಕ್ಕದಂತೆ ನನ್ನನ್ನು ತಪ್ಪಿಸಿ ಭದ್ರಪಡಿಸು.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ.


ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ ನನ್ನ ಹೆಜ್ಜೆ ಹಿಡಿದು ಬರುತ್ತಾರೆ.


ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.


ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ದೇಶವನ್ನು ಬಿಟ್ಟುಹೋದಾರು. ಅವರು ವೃದ್ಧಿಯಾಗದಂತೆ ನಾವು ಉಪಾಯ ಮಾಡೋಣ ಎಂದು ಹೇಳಿದನು.


ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು