Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:1 - ಕನ್ನಡ ಸತ್ಯವೇದವು J.V. (BSI)

1 ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೇ ಪ್ರಭು, ಸ್ವರ್ಗ ಸೇನಾಧೀಶ್ವರ I ನಿನ್ನ ನಿವಾಸಗಳೆನಿತೋ ಸುಂದರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೇನಾಧೀಶ್ವರನಾದ ಯೆಹೋವನೇ, ನಿನ್ನ ಆಲಯವು ಎಷ್ಟೋ ರಮ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:1
17 ತಿಳಿವುಗಳ ಹೋಲಿಕೆ  

ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ನಿನ್ನ ಸತ್ಯಪ್ರಸನ್ನತೆಗಳನ್ನು [ದೂತರನ್ನೋ ಎಂಬಂತೆ] ಕಳುಹಿಸು; ಅವೇ ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಸೇರಿಸಲಿ.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಯೆಹೋವನ ಮಂದಿರಕ್ಕೆ ಹೋಗೋಣ, ಬಾ ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.


ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.


ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ.


ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ ಅದರ ಸೈನ್ಯವನ್ನೂ ಭೂವಿುಯನ್ನೂ ಅದರ ಮೇಲಿರುವದನ್ನೂ ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟು ಮಾಡಿ ಸಮಸ್ತ ಪ್ರಾಣಿಗಳ ಜೀವಾಧಾರನಾಗಿರುತ್ತೀ.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹ ಧ್ವನಿಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು