ಕೀರ್ತನೆಗಳು 84:3 - ಕನ್ನಡ ಸತ್ಯವೇದವು J.V. (BSI)3 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ. ಅಧ್ಯಾಯವನ್ನು ನೋಡಿ |