Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:6 - ಕನ್ನಡ ಸತ್ಯವೇದವು J.V. (BSI)

6 ಕಣ್ಣೀರಿನ ತಗ್ಗನ್ನು ದಾಟುವಾಗ ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯೂ ಅದನ್ನು ಸಮೃದ್ಧಿಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಾಟುವಾಗ ಬಾಕಾ ಕಣಿವೆಯನು I ಚಿಲುಮೆಗಳನಾಗಿ ಮಾಡುವರದನು II ಮುಂಗಾರು ಮಳೆಯು ಸುರಿಯಲು I ತುಂಬಿ ತುಳುಕುವುದಾ ಸರಸಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. ಮುಂಗಾರು ಮಳೆಯು ಅದನ್ನು ನೀರಿನ ತೊರೆಗಳಿಂದ ಸಮೃದ್ಧಿಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:6
12 ತಿಳಿವುಗಳ ಹೋಲಿಕೆ  

ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.


ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು