Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:8 - ಕನ್ನಡ ಸತ್ಯವೇದವು J.V. (BSI)

8 ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು ಅನ್ನುತ್ತಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ವರ್ಗಸೇನಾಧೀಶ್ವರ, ಸ್ವಾಮಿದೇವ ಕಿವಿಗೊಡು ನನ್ನ ಮೊರೆಗೆ I ಯಕೋಬ ಕುಲದೇವಾ, ನನ್ನ ಪ್ರಾರ್ಥನೆ ಬೀಳಲಿ ನಿನ್ನ ಕಿವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:8
4 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯೆತೋರಿಸಬೇಡ. ಸೆಲಾ.


ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು