Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:5 - ಕನ್ನಡ ಸತ್ಯವೇದವು J.V. (BSI)

5 ಸದಾಕಾಲವೂ ನಮ್ಮ ಮೇಲೆ ಸಿಟ್ಟುಮಾಡುವಿಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಎಂದೆಂದಿಗೂ ನಮ್ಮ ಮೇಲೆ ಖಂಡಿಸುವಿರೋ? ತಲತಲಾಂತರಕ್ಕೂ ನಿಮ್ಮ ಬೇಸರ ಬೆಳೆಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:5
12 ತಿಳಿವುಗಳ ಹೋಲಿಕೆ  

ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?


ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ.


ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿ


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ಭ್ರಮಣಮದ್ಯವನ್ನು ಕುಡಿಸಿದ್ದೀ.


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು