Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೋರಿಸೆಮಗೆ ಪ್ರಭು ಕರುಣೆಯನು I ಅನುಗ್ರಹಿಸೆಮಗೆ ರಕ್ಷಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. ನಮ್ಮನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಮಗೆ ತೋರಿಸಿರಿ. ನಿಮ್ಮ ರಕ್ಷಣೆಯನ್ನು ನಮಗೆ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:7
5 ತಿಳಿವುಗಳ ಹೋಲಿಕೆ  

ದೀರ್ಘಾಯುಷ್ಯವನ್ನು ಅನುಗ್ರಹಿಸಿ ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗಗೊಡಿಸುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು.


ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿದೆ ಎಂದು ನೀವೆನ್ನುವ ಈ ಸ್ಥಳದಲ್ಲಿ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇವಿುನ ಬೀದಿಗಳಲ್ಲಿ ಹರ್ಷಧ್ವನಿ,


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು