Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:12 - ಕನ್ನಡ ಸತ್ಯವೇದವು J.V. (BSI)

12 ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ದೇವರಾದ ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು. ನಿಮ್ಮ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:12
19 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಹೀಗೆ ನೀವು ಏಕ ಮನಸ್ಸಿನಿಂದ ಒಮ್ಮುಖವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.


ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.


ಆದದರಿಂದ ನಮ್ಮ ದೇವರೇ, ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವದು.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ಪರಾತ್ಪರನೇ, ನಿನ್ನಲ್ಲಿ ನಾನು ಸಂತೋಷಿಸಿ ಉತ್ಸಾಹಪಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು