Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:14 - ಕನ್ನಡ ಸತ್ಯವೇದವು J.V. (BSI)

14 ದೇವರೇ, ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕೆ ಕಾದಿದೆ. ಅವರು ನಿನ್ನನ್ನು ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನನ್ನು ಗೌರವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಬಲಾತ್ಕಾರಿಗಳ ಗುಂಪು ನನ್ನ ಪ್ರಾಣವನ್ನು ಹುಡುಕುತ್ತದೆ. ಅವರು ನಿಮ್ಮನ್ನು ಗೌರವಿಸುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:14
21 ತಿಳಿವುಗಳ ಹೋಲಿಕೆ  

ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ಅಗೆದಿದ್ದಾರೆ.


ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು.


ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಲೀಸಬೇಡ; ದುರ್ಜನರಿಂದ ನಾವು ಭ್ರಷ್ಟರಾಗದಂತೆ ಮಾಡು.


ದುಷ್ಟನು ನಿನ್ನನ್ನು ಯಾಕೆ ಅಲಕ್ಷ್ಯಮಾಡಬೇಕು? ದೇವರು ವಿಚಾರಿಸುವದೇ ಇಲ್ಲವೆಂದು ಹೇಳಿಕೊಳ್ಳುವದೇಕೆ?


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು -


ನನ್ನ ಕೆಡುಕಿಗೆ ಸಮಯನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು