ಕೀರ್ತನೆಗಳು 86:17 - ಕನ್ನಡ ಸತ್ಯವೇದವು J.V. (BSI)17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಹಗೆಗಾರರು ನೋಡಿ - ಯೆಹೋವನು ನೆರವಾಗಿ ಇವನನ್ನು ಸಂತೈಸಿದ್ದಾನೆಂದು ನಾಚಿಕೆಪಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ. ಅಧ್ಯಾಯವನ್ನು ನೋಡಿ |