Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:2 - ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಾಪಾಡು ಪ್ರಭು, ನಾ ನಿನ್ನ ಭಕ್ತನು I ಉದ್ಧರಿಸು ನಿನ್ನ ನಂಬಿದ ದಾಸನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! ನಾನು ನಿನ್ನ ಸೇವಕನು, ನೀನು ನನ್ನ ದೇವರು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಪ್ರಾಣವನ್ನು ಕಾಪಾಡಿರಿ, ನಾನು ನಿಮ್ಮ ಭಕ್ತ, ನೀವು ನನ್ನ ದೇವರು. ನಿಮ್ಮಲ್ಲಿ ಭರವಸವಿಟ್ಟಿರುವ ನಿಮ್ಮ ಸೇವಕನನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:2
23 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.


ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.


ನಾನು ನಿನ್ನವನು, ರಕ್ಷಿಸು. ನಿನ್ನ ನೇಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.


ಯೆಹೋವನೇ, ನಿನ್ನ ಮರೆಹೊಕ್ಕಿದ್ದೇನೆ; ನನಗೆ ಎಂದಿಗೂ ಆಶಾಭಂಗಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.


ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.


ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.


ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸುತ್ತಾನೆ.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.


ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು