Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸ್ಥಾಪಿಸಿದ್ದು ಪರಿಶುದ್ಧ ಪರ್ವತಗಳಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ತಮ್ಮ ಪಟ್ಟಣದ ಅಸ್ತಿವಾರವನ್ನು ಪರಿಶುದ್ಧ ಪರ್ವತದಲ್ಲಿ ಸ್ಥಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:1
17 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ನಾವು ಪರಿಶುದ್ಧಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ವಾಣಿಯನ್ನು ನಾವೇ ಕೇಳಿದೆವು.


ಎಲೈ ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಾರ್ಥವಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.


ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ.


ಆತನು ತನ್ನ ಆಲಯವನ್ನು ಪರ್ವತದಂತೆಯೂ ತಾನು ಸ್ಥಾಪಿಸಿದ ಭೂವಿುಯಂತೆಯೂ ಶಾಶ್ವತವಾಗಿ ಕಟ್ಟಿದನು.


ಯೆರೂಸಲೇಮೇ, ನಮ್ಮ ಕಾಲುಗಳು ನಿನ್ನ ಬಾಗಲುಗಳಲ್ಲಿ ಸೇರಿರುತ್ತವಲ್ಲಾ!


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು