Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:2 - ಕನ್ನಡ ಸತ್ಯವೇದವು J.V. (BSI)

2 ಆತನು ಯಾಕೋಬ್‍ವಂಶದವರ ಎಲ್ಲಾ ನಿವಾಸಗಳಿಗಿಂತ ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:2
7 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಆದರೆ ಈಗ ನನ್ನ ನಾಮಸ್ಥಾಪನೆಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು