Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:4 - ಕನ್ನಡ ಸತ್ಯವೇದವು J.V. (BSI)

4 ಐಗುಪ್ತ ಬಾಬೆಲ್ ದೇಶಗಳವರನ್ನು ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್ ಜನಾಂಗಗಳು ಅಲ್ಲೇ ಹುಟ್ಟಿದವು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:4
25 ತಿಳಿವುಗಳ ಹೋಲಿಕೆ  

ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿ.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.


ಅವನು ಎದ್ದು ಹೊರಟುಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?


ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕೂತುಕೊಂಡು ಚೀಯೋನನ್ನು ನೆನಸಿ ಅತ್ತೆವು.


ಅವನು ನಿಂತು ಇಸ್ರಾಯೇಲ್‍ಸೈನ್ಯದವರನ್ನು ಕೂಗಿ ಅವರಿಗೆ - ನೀವು ಯುದ್ಧಮಾಡಬಂದದ್ದೇಕೆ? ನಾನು ಫಿಲಿಷ್ಟಿಯನು, ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು