Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:10 - ಕನ್ನಡ ಸತ್ಯವೇದವು J.V. (BSI)

10 ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೃತರು ನಿನ್ನದ್ಭುತಗಳನು ಮೆಚ್ಚುವುದುಂಟೆ I ಸತ್ತ ಜನರೆದ್ದು ನಿನ್ನ ಸ್ತುತಿಸುವುದುಂಟೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವೆಯಾ? ಇಲ್ಲ! ದೆವ್ವಗಳು ಎದ್ದುನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸತ್ತವರಿಗೆ ಅದ್ಭುತಗಳನ್ನು ತೋರಿಸುವಿರೋ? ಸತ್ತವರು ಎದ್ದು ನಿಮ್ಮನ್ನು ಕೊಂಡಾಡುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:10
13 ತಿಳಿವುಗಳ ಹೋಲಿಕೆ  

ಮೃತರಿಗೆ ನಿನ್ನ ಜ್ಞಾಪಕವಿರುವದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವದೋ? ಅದು ನಿನ್ನ ನಂಬಿಕೆಯನ್ನು ಹೊಗಳುವದೇನು?


ನಾನು ಸಾಯುವದಿಲ್ಲ; ಜೀವದಿಂದಿದ್ದು ಯಾಹುವಿನ ಕ್ರಿಯೆಗಳನ್ನು ಸಾರುವೆನು.


ಸತ್ತವರು ಯಾಹುವನ್ನು ಸ್ತುತಿಸುವದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವದಿಲ್ಲ.


ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.


ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು