Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:11 - ಕನ್ನಡ ಸತ್ಯವೇದವು J.V. (BSI)

11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ ನಾಶಲೋಕದಲ್ಲಿ ನಿನ್ನ ಸತ್ಯತೆಯನ್ನೂ ಸಾರುವದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:11
11 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ.


ಪಾತಾಳವೂ ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಮತ್ತೂ ಸ್ಪಷ್ಟ.


ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು ಬೀಳಿಸಿ ನಾಶಮಾಡಿಬಿಡುತ್ತೀ.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ಪಾತಾಳವು ಆತನ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು