Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:12 - ಕನ್ನಡ ಸತ್ಯವೇದವು J.V. (BSI)

12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ ಮರವೆಯ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಿಳಿವರೆ ನಿನ್ನ ಪವಾಡಗಳನು ಇರುಳ ನಿಶೆಯೊಳು? I ನಿನ್ನ ನ್ಯಾಯ ನೀತಿಯನು ಮರೆವಾ ಲೋಕದೊಳು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ ನಿಮ್ಮ ನೀತಿಯೂ ತಿಳಿಯಲಾಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:12
10 ತಿಳಿವುಗಳ ಹೋಲಿಕೆ  

ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವದನ್ನು ಕಂಡೆನು, ಅವರು [ಸುಖವಾಗಿ] ಗತಿಸಿದರು; ಧಾರ್ಮಿಕರೋ ಪರಿಶುದ್ಧಸ್ಥಾನದಿಂದ ತೊಲಗಬೇಕಾಯಿತು, ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು; ಇದೂ ವ್ಯರ್ಥ.


ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!


ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.


ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಸಮಾಧಿಯಲ್ಲಿ ಬಿದ್ದಿರುವ ಹತರಂತಿದ್ದೇನೆ. ಅವರು ನಿನ್ನ ಪರಿಪಾಲನೆಗೆ ಹೊರಗಾದವರು; ಅಂಥವರನ್ನು ನೀನು ಜ್ಞಾಪಿಸುವದೇ ಇಲ್ಲ.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು