Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:9 - ಕನ್ನಡ ಸತ್ಯವೇದವು J.V. (BSI)

9 ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಯೊಡ್ಡಿ ನಿನಗೆ ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:9
19 ತಿಳಿವುಗಳ ಹೋಲಿಕೆ  

ನೀನಂತು ಮನಸ್ಸನ್ನು ತಿರುಗಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತು.


ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.


ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.


ನನ್ನ ಗುಂಡಿಗೆ ಬಡುಕೊಳ್ಳುತ್ತದೆ; ನನ್ನ ಚೈತನ್ಯವು ಕುಗ್ಗಿಹೋಯಿತು;


ಯೇಸು ಕಣ್ಣೀರು ಬಿಟ್ಟನು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.


ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ


ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ


ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ದುಃಖದಿಂದ ನನ್ನ ಕಣ್ಣು ಡೊಗರಾಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಮೊಬ್ಬಾಯಿತು.


ಕರಕರೆಯಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ [ನಿಸ್ಸಾರ] ಆಗಿವೆ.


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;


ದೇವರು ಒಬ್ಬನ ಸುತ್ತಲೂ ಬೇಲಿ ಹಾಕಿ ದಾರಿಕಟ್ಟಿದ ಮೇಲೆ [ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?]


ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು