Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನಿನ್ನ ಸತ್ಯತೆಯನ್ನು ಮುಂದಣ ಸಂತಾನದವರೆಲ್ಲರಿಗೂ ನನ್ನ ಬಾಯಿ ತಿಳಿಯಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ಸದಾಕಾಲ ಹಾಡಿ ಕೊಂಡಾಡುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:1
24 ತಿಳಿವುಗಳ ಹೋಲಿಕೆ  

ಪ್ರೀತಿನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.


ನಿನ್ನ ಸತ್ಯತೆಯು ತಲತಲಾಂತರಕ್ಕೂ ಇರುವದು. ನೀನು ಭೂವಿುಯನ್ನು ಸ್ಥಾಪಿಸಿರುತ್ತೀ; ಅದು ಕದಲುವದಿಲ್ಲ.


ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ಸತ್ಯಸಂಧತೆಯು ದೊಡ್ಡದು.


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವದಿಲ್ಲ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.


ಯಾಹುವಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು ದಾವೀದನಿಗೆ ವಾಗ್ದಾನಮಾಡಿ ನಡಿಸುತ್ತಿದ್ದ ಮುಂಚಿನ ಕೃಪಾಕಾರ್ಯಗಳು ಎಲ್ಲಿ?


ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ


ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.


ಆದರೆ ನನ್ನ ಪ್ರೀತಿಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವದು.


ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ ನಾಶಲೋಕದಲ್ಲಿ ನಿನ್ನ ಸತ್ಯತೆಯನ್ನೂ ಸಾರುವದುಂಟೋ?


ಜೆರಹನ ಮಕ್ಕಳು - ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ದಾರ; ಒಟ್ಟು ಐದು ಮಂದಿ.


ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಪ್ರಸಿದ್ಧವಾಯಿತು.


ಸೊಲೊಮೋನನಾದರೋ ಪ್ರತಿವರುಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು