Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:15 - ಕನ್ನಡ ಸತ್ಯವೇದವು J.V. (BSI)

15 ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:15
21 ತಿಳಿವುಗಳ ಹೋಲಿಕೆ  

ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.


ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.


ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.


ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ.


ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!


ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷ ಮಾಡಿರಿ.


ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ ಎಂಬದೇ.


ಯಾಕೋಬ್ಯರಲ್ಲಿ ಯಾವ ಆಪತ್ತಿನ ಸೂಚನೆಯೂ ಇಲ್ಲ; ಇಸ್ರಾಯೇಲ್ಯರಿಗೆ ವಿಪತ್ತು ಸಂಭವಿಸುವ ಹಾಗೆ ತೋರುವದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡಲೇ ಇದ್ದಾನೆ; ಅವರು ತಮ್ಮ ಅರಸನಿಗೋಸ್ಕರ ಮಾಡುವ ಜಯಘೋಷವು ಕೇಳಿಸುತ್ತಲೇ ಇದೆ.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.


ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.


ಪ್ರಭುವಿನ ಮುಖಪ್ರಸನ್ನತೆ ಜೀವ; ಆತನ ದಯೆ ಮುಂಗಾರುಮುಗಿಲು.


ಅದು ಉದಯದಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು