Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:26 - ಕನ್ನಡ ಸತ್ಯವೇದವು J.V. (BSI)

26 ಅವನು ನನ್ನೊಡನೆ - ನನ್ನ ತಂದೆಯೂ ದೇವರೂ ಆಶ್ರಯದುರ್ಗವೂ ನೀನೇ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:26
17 ತಿಳಿವುಗಳ ಹೋಲಿಕೆ  

ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.


ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ! ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ!


ಬನ್ನಿರಿ, ಯೆಹೋವನಿಗೆ ಉತ್ಸಾಹ ಧ್ವನಿಗೈಯುವಾ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.


ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.


ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲಿದರೂ ಬೀಳೆನು.


ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;


ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟ.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಮೂರು ಗಂಟೆಗೆ ಯೇಸು - ಎಲೋಹಿ, ಎಲೋಹಿ, ಲಮಾ ಸಬಕ್ತಾನೀ ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು, ನಾನು ಅವನಿಗೆ ತಂದೆಯಾಗಿರುವೆನು; ಇಸ್ರಾಯೇಲ್ಯರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬದಾಗಿ ಹೇಳಿದನು.


ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ. ಎಂತಲೂ ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು ಎಂತಲೂ ದೇವರು ತನ್ನ ದೂತರೊಳಗೆ ಯಾವನಿಗಾದರೂ ಎಂದಾದರೂ ಹೇಳಿದ್ದುಂಟೋ?


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ನಾನು ಎಫ್ರಾಯೀವಿುನ ರಥಬಲವನ್ನೂ ಯೆರೂಸಲೇವಿುನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಹರಡಿಕೊಂಡಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು