Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:28 - ಕನ್ನಡ ಸತ್ಯವೇದವು J.V. (BSI)

28 ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ I ಅವನೊಡನೆ ನಾ ಮಾಡಿದೊಪ್ಪಂದ ಸ್ಥಿರಸ್ಥಾಯಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಆರಿಸಿಕೊಂಡ ರಾಜನನ್ನು ನನ್ನ ಪ್ರೀತಿಯು ಸದಾಕಾಲ ಸಂರಕ್ಷಿಸುವುದು. ನಾನು ಅವನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಎಂದಿಗೂ ಕೊನೆಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:28
9 ತಿಳಿವುಗಳ ಹೋಲಿಕೆ  

ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ.


ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಡುವನು.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು