Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:35 - ಕನ್ನಡ ಸತ್ಯವೇದವು J.V. (BSI)

35 ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿ ಹೇಳಿದ್ದೇನೆ; ಅದರ ವಿಷಯದಲ್ಲಿ ದಾವೀದನಿಗೆ ಸುಳ್ಳುಗಾರನಾಗುವದಿಲ್ಲ. ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮಾಡಿರುವೆ ಪ್ರಮಾಣ ನನ್ನ ಪವಿತ್ರತೆಯ ಮೇಲೆ I ಸುಳ್ಳಾಡಲಾರೆ ದಾವೀದನಿಗೀ ವಿಷಯದ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನನ್ನ ಪವಿತ್ರತ್ವದ ಮೇಲೆ ಆಣೆಯಿಟ್ಟು ದಾವೀದನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದೆನು. ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಒಂದೇ ಸಾರಿ ನನ್ನ ಪರಿಶುದ್ಧತ್ವದಿಂದ ಆಣೆಯಿಟ್ಟು ಹೇಳಿದ್ದೇನೆ. ದಾವೀದನಿಗೆ ಸುಳ್ಳಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:35
9 ತಿಳಿವುಗಳ ಹೋಲಿಕೆ  

ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -


ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.


ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು - ಇಗೋ, ನಿಮ್ಮನ್ನು ಕೊಂಡಿಗಳಿಂದಲೂ ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.


ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವದಕ್ಕೆ ಬದ್ಧರಾಗಿದ್ದೇವೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು