ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?