Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:41 - ಕನ್ನಡ ಸತ್ಯವೇದವು J.V. (BSI)

41 ದಾರಿಗರೆಲ್ಲರೂ ಅವನನ್ನು ಸುಲಿಗೆಮಾಡುತ್ತಾರೆ; ಸುತ್ತಣವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಸುಲಿಗೆ ಮಾಡುತಿಹರವನನು ದಾರಿಗರೆಲ್ಲರು I ಪರಿಹಾಸ್ಯಕ್ಕೆ ಈಡುಮಾಡುತಿಹರು ನೆರೆಯವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅವನ ನೆರೆಹೊರೆಯವರು ಅವನನ್ನು ನೋಡಿ ನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:41
18 ತಿಳಿವುಗಳ ಹೋಲಿಕೆ  

ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣವರ ಪರಿಹಾಸ್ಯ ಕುಚೋದ್ಯಗಳಿಗೆ ಗುರಿಯಾದೆವು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಯೆಹೋವನೇ, ನಮಗಾದ ದುರ್ಗತಿಯನ್ನು ಚಿತ್ತಕ್ಕೆ ತಂದುಕೋ; ನಾವು ಗುರಿಯಾಗಿರುವ ದೂಷಣೆಯನ್ನು ದೃಷ್ಟಿಸಿ ನೋಡು.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.


ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.


ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು