Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:46 - ಕನ್ನಡ ಸತ್ಯವೇದವು J.V. (BSI)

46 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೆಹೋವನೇ, ಇನ್ನೆಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:46
17 ತಿಳಿವುಗಳ ಹೋಲಿಕೆ  

ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?


ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರಿಗೆ ಶೋಭನವಾಗಲಿಲ್ಲ.


ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೂ [ಕೋಪ ಮಾಡುವಿ]? ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಸದಾಕಾಲವೂ ನಮ್ಮ ಮೇಲೆ ಸಿಟ್ಟುಮಾಡುವಿಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?


ಯೆಹೋವನೇ, ನೀನು ಯಾಕೆ ದೂರವಾಗಿ ನಿಂತಿದ್ದೀ; ಕಷ್ಟಕಾಲದಲ್ಲಿ ಯಾಕೆ ಮರೆಯಾಗುತ್ತೀ?


ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವದಿಲ್ಲ.


ನನ್ನ ಆಯುಷ್ಯವನ್ನು ಕಡಿಮೆಮಾಡಿ ಬಿಟ್ಟಿದ್ದಾನೆ. ಆದದರಿಂದ - ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಕ್ಕೂ ಇರುತ್ತವೆ.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಫರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ [ಎಂಬದಾಗಿ ಅಂದುಕೊಳ್ಳುತ್ತೀರೋ?]


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು