ಕೀರ್ತನೆಗಳು 89:5 - ಕನ್ನಡ ಸತ್ಯವೇದವು J.V. (BSI)5 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವದು; ನಿನ್ನ ಸತ್ಯತೆಯನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು. ಅಧ್ಯಾಯವನ್ನು ನೋಡಿ |
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.