Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:51 - ಕನ್ನಡ ಸತ್ಯವೇದವು J.V. (BSI)

51 ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವದನ್ನೂ ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51-52 ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:51
17 ತಿಳಿವುಗಳ ಹೋಲಿಕೆ  

ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಕೆಲವು ಸಾರಿ ನೀವು ನಿಂದೆಗಳನ್ನೂ ಸಂಕಟಗಳನ್ನೂ ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಸೇರಿದವರಾಗಿದ್ದು ಕಷ್ಟಾನುಭವಿಗಳಾದಿರಿ.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು


ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು;


ಆದರೆ ಫರಿಸಾಯರು ಅದನ್ನು ಕೇಳಿ - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೇ ಹೊರತು ಬೇರೆ ರೀತಿಯಿಂದ ಬಿಡಿಸುವದಿಲ್ಲ ಅಂದರು.


ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು.


ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು