Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:7 - ಕನ್ನಡ ಸತ್ಯವೇದವು J.V. (BSI)

7 ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:7
17 ತಿಳಿವುಗಳ ಹೋಲಿಕೆ  

ಪರಾತ್ಪರನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಅಧಿರಾಜನಾಗಿದ್ದಾನೆ.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


ಮತ್ತು ಸರ್ವಸಭೆಗೂ ಈ ಸಂಗತಿಗಳನ್ನು ಕೇಳಿದವರೆಲ್ಲರಿಗೂ ಮಹಾ ಭಯಹಿಡಿಯಿತು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ದೇವದೂತರುಗಳಿರಾ, ಪರಮಪ್ರಭಾವವು ಯೆಹೋವನದೇ ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ನಮ್ಮ ಯೆಹೋವದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ


ಹೀಗಿರಲು ದೇವರನ್ನು ಯಾರಿಗೆ ಹೋಲಿಸೀರಿ? ಯಾವ ರೂಪವನ್ನು ಆತನಿಗೆ ಸಮಮಾಡೀರಿ?


ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನಮಾಡುತ್ತೀರಿ ಎಂದು ಸದಮಲ ಸ್ವಾವಿುಯು ಕೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು