Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:9 - ಕನ್ನಡ ಸತ್ಯವೇದವು J.V. (BSI)

9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಂಕೆಯಲ್ಲಿಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಡಲ ಕಲ್ಲೋಲಗಳನ್ನೆಲ್ಲ ಅಂಕೆಯಲಿ ಇಡುವವನು ನೀನು I ತರಂಗವೇಳುವಾಗಲು ಕೂಡ ತಡೆಹಿಡಿವವನು ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:9
14 ತಿಳಿವುಗಳ ಹೋಲಿಕೆ  

ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ.


ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.


ನಮ್ಮ ಯೆಹೋವದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು