Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:10 - ಕನ್ನಡ ಸತ್ಯವೇದವು J.V. (BSI)

10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:10
24 ತಿಳಿವುಗಳ ಹೋಲಿಕೆ  

ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವದು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆದರೆ ಅದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳುಕೊಳ್ಳುತ್ತೇವೆ.


ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ನನ್ನ ಶರಣನೂ ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು