Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:11 - ಕನ್ನಡ ಸತ್ಯವೇದವು J.V. (BSI)

11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಂಕೀರ್ತಿಸಿರಿ ಸಿಯೋನಿನಲಿ ವಾಸಿಸುವ ಪ್ರಭುವನು I ಪ್ರಕಟಿಸಿರಿ ಜನತೆಗೆ ಆತನ ಮಹತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:11
20 ತಿಳಿವುಗಳ ಹೋಲಿಕೆ  

ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.


ನಾನು ಸಾಯುವದಿಲ್ಲ; ಜೀವದಿಂದಿದ್ದು ಯಾಹುವಿನ ಕ್ರಿಯೆಗಳನ್ನು ಸಾರುವೆನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳಿಕೆ ನರರಲ್ಲಿ ಭಯಹುಟ್ಟಿಸತಕ್ಕದ್ದಾಗಿದೆ.


ಸಾಲೇವಿುನಲ್ಲಿ ಆತನ ಬೀಡಾರವಿದೆ; ಚೀಯೋನಿನಲ್ಲಿ ಆತನು ನಿವಾಸಿಸುತ್ತಾನೆ.


ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು