Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:15 - ಕನ್ನಡ ಸತ್ಯವೇದವು J.V. (BSI)

15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:15
11 ತಿಳಿವುಗಳ ಹೋಲಿಕೆ  

ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲ ಮಾಡುವನು. ನಮ್ಮ ಯೆಹೋವದೇವರು ಅವರನ್ನು ಸಂಹರಿಸಿಬಿಡುವನು.


ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು.


ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.


ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು; ತನ್ನ ಭುಜಬಲದಿಂದ ಅವನಿಗೆ ವಿಜಯವನ್ನುಂಟು ಮಾಡುವನು.


ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವದು; ಆತನಿಂದಾದ ರಕ್ಷಣೆಯ ನಿವಿುತ್ತ ಆನಂದಪಡುವೆನು.


ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು