Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:18 - ಕನ್ನಡ ಸತ್ಯವೇದವು J.V. (BSI)

18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವದಿಲ್ಲ; ದೀನರ ನಿರೀಕ್ಷಣೆಯು ಕೆಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:18
15 ತಿಳಿವುಗಳ ಹೋಲಿಕೆ  

ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಸೆರೆಯವರ ಗೋಳಾಟವನ್ನು ಲಕ್ಷಿಸಿ ಮರಣಪಾತ್ರರನ್ನು ಬಿಡಿಸಿ


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ -


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಕರ್ತನಾದ ಯೆಹೋವನೇ, ಬಾಲ್ಯಾರಭ್ಯ ನನ್ನ ನಿರೀಕ್ಷೆಯೂ ಭರವಸವೂ ನೀನಲ್ಲವೋ?


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ ಎಷ್ಟೋ ಒಳ್ಳೇದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು