ಕೀರ್ತನೆಗಳು 9:19 - ಕನ್ನಡ ಸತ್ಯವೇದವು J.V. (BSI)19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ. ಅಧ್ಯಾಯವನ್ನು ನೋಡಿ |
ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು