Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:5 - ಕನ್ನಡ ಸತ್ಯವೇದವು J.V. (BSI)

5 ನೀನು ಮನುಷ್ಯರನ್ನು ಪ್ರವಾಹದಿಂದ ಬಡುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:5
16 ತಿಳಿವುಗಳ ಹೋಲಿಕೆ  

ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ಎಚ್ಚರವಾದವನು ಕನಸನ್ನು ಹೇಗೋ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.


ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.


ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.


ಉದಯಾಸ್ತಮಾನಗಳ ಮಧ್ಯದಲ್ಲಿ [ಜೀವಿಸಿ] ಜಜ್ಜಲ್ಪಡುತ್ತಾರೆ, ಹೀಗೆ ನಿತ್ಯನಾಶನಹೊಂದುವದನ್ನು ಯಾರೂ ಲಕ್ಷಿಸುವದಿಲ್ಲ.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.


ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ ಬೆಳಗಿನ ತನಕ ತಡಕೊಂಡೇ ಇದ್ದೆನು. ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.


ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು