Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:9 - ಕನ್ನಡ ಸತ್ಯವೇದವು J.V. (BSI)

9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಸಂದುಹೋಯಿತು; ನಮ್ಮ ವರುಷಗಳು ನಿಟ್ಟುಸಿರಿನಂತೆ ತೀರಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ಕೋಪವು ನಮ್ಮ ಜೀವನವನ್ನು ಕೊನೆಗೊಳಿಸಬಲ್ಲದು. ನಮ್ಮ ಜೀವಿತಗಳು ನಿಟ್ಟುಸಿರಿನಂತೆ ತೀರಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮ್ಮ ದಿವಸಗಳೆಲ್ಲಾ ನಿಮ್ಮ ಖಂಡನೆಯಿಂದಲೇ ದಾಟಿಹೋದವು. ನಮ್ಮ ವರ್ಷಗಳನ್ನು ನಿಟ್ಟುಸಿರಿನಲ್ಲಿ ಕಳೆಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:9
5 ತಿಳಿವುಗಳ ಹೋಲಿಕೆ  

ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು.


ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ.


ಸಾವಿರ ವರುಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನಿನ ದಿನದಂತೆಯೂ ರಾತ್ರಿಯ ಜಾವದಂತೆಯೂ ಅವೆ.


ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ನೂಕಿಬಿಡಲಿ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ ಪರದೇಶದವನೂ ಆಗಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು