Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:16 - ಕನ್ನಡ ಸತ್ಯವೇದವು J.V. (BSI)

16 ದೀರ್ಘಾಯುಷ್ಯವನ್ನು ಅನುಗ್ರಹಿಸಿ ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:16
14 ತಿಳಿವುಗಳ ಹೋಲಿಕೆ  

ಅವು ನಿನ್ನ ದಿನಗಳನ್ನು ಹೆಚ್ಚಿಸಿ ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ ನಿನಗೆ ಸುಕ್ಷೇಮವನ್ನುಂಟುಮಾಡುವವು.


ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ ಘನತೆಯೂ ಉಂಟು.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು ನೀನು ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ನೀವೂ ನಿಮ್ಮ ಪುತ್ರಪೌತ್ರಾದಿಸಂತತಿಯವರೂ ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ನಾನು ಈಗ ಬೋಧಿಸುವ ಆತನ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕೆಂದೂ ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.


ನೀನು ನೇವಿುಸಿರುವ ರಕ್ಷಕನನ್ನು ನಾನು ಕಣ್ಣಾರೆ ಕಂಡೆನು.


ಧನ ಮಾನ ಜೀವಗಳು ದೀನಭಾವಕ್ಕೂ ಯೆಹೋವನ ಭಯಕ್ಕೂ ಫಲ.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು