Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:8 - ಕನ್ನಡ ಸತ್ಯವೇದವು J.V. (BSI)

8 ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ಪ್ರತಿದಂಡನೆಯುಂಟೆಂಬದಕ್ಕೆ ಸಾಕ್ಷಿಯಾಗಿರುವಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:8
9 ತಿಳಿವುಗಳ ಹೋಲಿಕೆ  

ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವದನ್ನು ನೀನು ನೋಡುವಿ.


ನೀವೇ ಇದನ್ನು ಕಣ್ಣಾರೆ ಕಂಡು - ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ ಮಹಾಮಹಿಮೆಯುಳ್ಳವನು ಅಂದುಕೊಳ್ಳುವಿರಿ.


ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರೋಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಯಾಕಂದರೆ ದೇವದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯವಾದ ಪ್ರತಿಫಲವುಂಟಾದ ಮೇಲೆ [ನಮ್ಮ ಮುಂದಿಟ್ಟಿರುವ]


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು