Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:12 - ಕನ್ನಡ ಸತ್ಯವೇದವು J.V. (BSI)

12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರುವೃಕ್ಷದ ಹಾಗೆ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:12
17 ತಿಳಿವುಗಳ ಹೋಲಿಕೆ  

ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.


ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರುವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.


ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.


ಉದ್ದವಾಗಿ ಚಾಚಿಕೊಂಡಿರುವ ತಗ್ಗುಗಳಂತೆಯೂ, ನದಿಯ ಬಳಿಯಲ್ಲಿರುವ ತೋಟಗಳಂತೆಯೂ ಕಾಣಿಸುತ್ತವೆ. ಯೆಹೋವನು ನೆಟ್ಟ ಅಗರು ಮರಗಳಿಗೂ ನೀರಿನ ಬಳಿಯಲ್ಲಿರುವ ದೇವದಾರು ವೃಕ್ಷಗಳಿಗೂ ಸಮಾನವಾಗಿವೆ.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು.


ಅವನ ದಿವಸಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.


ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.


ದುಷ್ಟರು ಹುಲ್ಲಿನಂತೆ ಬೆಳೆಯುವದೂ ಕೆಡುಕರು ಹೂವಿನಂತೆ ಮೆರೆಯುವದೂ ತೀರಾ ಹಾಳಾಗುವದಕ್ಕಾಗಿಯೇ.


ಅವನು ಲೆಬನೋನಿನ ದೇವದಾರುವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ ಎಲ್ಲಾ ಪಶುಪಕ್ಷಿಜಲಜಂತು ಕ್ರಿವಿುಕೀಟಗಳನ್ನೂ ಕುರಿತು ಪ್ರಸ್ತಾಪಿಸಿದನು.


ಬೆಟ್ಟಗಳೂ ಎಲ್ಲಾ ಗುಡ್ಡಗಳೂ ಹಣ್ಣಿನ ಮರಗಳೂ ಎಲ್ಲಾ ತುರಾಯಿ ಗಿಡಗಳೂ


ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ಹಗೆಗಳನ್ನು ಇಷ್ಟವಿದ್ದಂತೆ ಮಾಡಿದರು.


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವದನ್ನು ನೀನು ನೋಡುವಿ.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು