Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:14 - ಕನ್ನಡ ಸತ್ಯವೇದವು J.V. (BSI)

14 ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮುದಿಪ್ರಾಯದಲ್ಲಿಯೂ ಫಲ ಕೊಡುವರು. ಅವರು ಹಸಿರಾಗಿ ಶೋಭಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:14
13 ತಿಳಿವುಗಳ ಹೋಲಿಕೆ  

ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು