Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:2 - ಕನ್ನಡ ಸತ್ಯವೇದವು J.V. (BSI)

2 ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-3 ಹತ್ತು ತಂತಿವಾದ್ಯಗಳನ್ನೂ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ನುಡಿಸುತ್ತಾ ನಿನ್ನ ಪ್ರೀತಿಯ ಕುರಿತು ಮುಂಜಾನೆಯಲ್ಲಿಯೂ ನಿನ್ನ ನಂಬಿಗಸ್ತಿಕೆಯ ಕುರಿತು ರಾತ್ರಿಯಲ್ಲಿಯೂ ಹಾಡುವುದು ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:2
14 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ದಿನಂಪ್ರತಿ ನಿನ್ನನ್ನು ಕೀರ್ತಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.


ನನ್ನ ಸೃಷ್ಟಿಕರ್ತನಾದ ದೇವರು ಎಲ್ಲಿ, ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡಮಾಡುತ್ತಾನಲ್ಲಾ;


ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು.


ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ -


ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.


ಪ್ರೀತಿನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.


ಯಾಹುವಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವದು ಒಳ್ಳೇದೂ ಸಂತೋಷಕರವೂ ಆಗಿದೆ; ಆತನನ್ನು ಕೀರ್ತಿಸುವದು ಯುಕ್ತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು