Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:3 - ಕನ್ನಡ ಸತ್ಯವೇದವು J.V. (BSI)

3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ ರಾತ್ರಿಯಲ್ಲಿ ನಿನ್ನ ಸತ್ಯತೆಯನ್ನೂ ವರ್ಣಿಸುವದು ಉಚಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವರ್ಣಿಸುವುದುಚಿತ ವೀಣಾ ಸ್ವರಮಂಡಲದಿಂದ I ಕೊಳಲ ದನಿಯಿಂದ, ಕಿನ್ನರಿಯ ನಾದಸ್ವರದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:3
17 ತಿಳಿವುಗಳ ಹೋಲಿಕೆ  

ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ಸಂಕೀರ್ತಿಸಿರಿ.


ಮುಂಗಡೆಯಲ್ಲಿ ಹಾಡುವವರೂ ಹಿಂಗಡೆಯಲ್ಲಿ ವಾದ್ಯಬಾರಿಸುವವರೂ ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ -


ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು.


ಇನ್ನೊಂದು ಭಾಗವು ಅರಮನೆಯನ್ನೂ ಮತ್ತೊಂದು ಭಾಗವು ಯೆಸೋದ್‍ಬಾಗಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು.


ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತೂರಿ ಇವುಗಳ ಧ್ವನಿಯೊಡನೆ ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿಕಿನ್ನರಿಗಳಿಂದ ಆತನನ್ನು ಭಜಿಸಲಿ.


ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು.


ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.


ಆಗ ದಾವೀದನು ಲೇವಿಯರ ಪ್ರಧಾನರಿಗೆ - ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ ಕಿನ್ನರಿ ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹ ಧ್ವನಿಮಾಡುವದಕ್ಕಾಗಿ ನೇವಿುಸಿರಿ ಎಂದು ಆಜ್ಞಾಪಿಸಲು


ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ಮತ್ತು


ಅವರು ಸ್ವರಮಂಡಲ ಕಿನ್ನರಿ ತುತೂರಿ ಇವುಗಳೊಡನೆ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.


ನಾನು ನನ್ನ ಶರಣನಿಗೆ - ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು ಎಂದು ಮೊರೆಯಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು