Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ; ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಕಾರ್ಯಗಳಿಂದ ಪ್ರಭು, ನನ್ನನ್ನು ಆನಂದಗೊಳಿಸಿರುವೆ I ನಿನ್ನಾ ಕಾರ್ಯಗಳ ನೋಡಿ, ನಾನು ಉಲ್ಲಾಸದಿಂದ ಹಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿಯೂ ಸಂತೋಷಗೊಳಿಸಿರುವೆ. ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:4
20 ತಿಳಿವುಗಳ ಹೋಲಿಕೆ  

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ;


ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ.


ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.


ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಹಳೇ ದಿನಗಳನ್ನು ನೆನಸಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ.


ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.


ನಿನ್ನ ಸೇವಕರಿಗೆ ನಿನ್ನ ರಕ್ಷಾಕಾರ್ಯವೂ ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.


ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳ ಹೃದಯರೆಲ್ಲರೂ ಹಿಗ್ಗುವರು.


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ಸಂಕೀರ್ತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು