Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:7 - ಕನ್ನಡ ಸತ್ಯವೇದವು J.V. (BSI)

7 ದುಷ್ಟರು ಹುಲ್ಲಿನಂತೆ ಬೆಳೆಯುವದೂ ಕೆಡುಕರು ಹೂವಿನಂತೆ ಮೆರೆಯುವದೂ ತೀರಾ ಹಾಳಾಗುವದಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ ಅವರು ನಿತ್ಯ ದಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:7
21 ತಿಳಿವುಗಳ ಹೋಲಿಕೆ  

ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವದು.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.


ಜಾರಿಬಿದ್ದವರಿಗೆ ಅಪಮಾನವು ಕಾದಿರುತ್ತದೆ. ಕಳ್ಳರ ಗುಡಾರಗಳಾದರೋ ಸಮೃದ್ಧಿವಾಗಿರುವವು, ಕೈಯಲ್ಲಿರುವದನ್ನೇ ದೇವರನ್ನಾಗಿ ಮಾಡಿಕೊಂಡು ದೇವರನ್ನು ರೇಗಿಸುವವರು ಸುರಕ್ಷಿತರಾಗಿದ್ದಾರೆ.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಕೆಡುಕರೆಲ್ಲರು ಉಬ್ಬಿಕೊಂಡು ಅಹಂಕಾರವನ್ನು ಕಕ್ಕುತ್ತಾರೆ.


ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು