Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:1
30 ತಿಳಿವುಗಳ ಹೋಲಿಕೆ  

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.


ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನೂ


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.


ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬದು ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ.


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ.


ನಿನ್ನನ್ನು ನೀನೇ ಮಹಿಮೆಘನತೆಗಳಿಂದ ಭೂಷಿಸಿಕೊಂಡು ಪ್ರಭಾವಮಹತ್ತುಗಳನ್ನು ಧರಿಸಿಕೋ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ಪರ್ವತಗಳ ಮೇಲೆ ತ್ವರೆಪಡುತ್ತಾ ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಒಳ್ಳೆಯ ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು ರಕ್ಷಣೆಯನ್ನು ಪ್ರಕಟಿಸುತ್ತಾ - ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ.


ಆಕಾಶವನ್ನು ನಿಲ್ಲಿಸಬೇಕೆಂತಲೂ ಭೂಲೋಕವನ್ನು ಸ್ಥಾಪಿಸಬೇಕೆಂತಲೂ ಚೀಯೋನಿಗೆ ನೀನು ನನ್ನ ಜನವೆಂದು ಹೇಳಬೇಕೆಂತಲೂ ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ.


ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು