Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರಿಟ್ಟವು; ನದಿಗಳು ಘೋಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಮುದ್ರಗಳು ಪ್ರಭು, ಮೊರೆಯುತಿಹವು I ಗರ್ಜನೆಗೈದು ಭೋರ್ಗರೆಯುತಿಹವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ. ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ. ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ. ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:3
17 ತಿಳಿವುಗಳ ಹೋಲಿಕೆ  

ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.


ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ಆ ಸರ್ಪನು ಸ್ತ್ರೀಯನ್ನು ಬಡಿಸಿಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.


ನನ್ನನ್ನು ಸಮುದ್ರದ ಉದರದಲ್ಲಿ, ಅಗಾಧಸ್ಥಳದಲ್ಲಿ ಎಸೆದುಬಿಟ್ಟಿಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ನಿನ್ನ ಅಲೆಗಳೂ ತೆರೆಗಳೂ ನನ್ನ ಮೇಲ್ಗಡೆ ಹಾದುಹೋಗುತ್ತಿದ್ದವು.


ಸಮುದ್ರವು ಘೋಷಿಸುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರೇನು? ಸೆಲಾ.


ಒಂದು ನದಿ ಅದೆ; ಅದರ ಕಾಲುವೆಗಳು ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ ದೇವನಗರವನ್ನು ಸಂತೋಷಪಡಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು