Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:4 - ಕನ್ನಡ ಸತ್ಯವೇದವು J.V. (BSI)

4 ಜಲರಾಶಿಗಳ ಘೋಷಕ್ಕಿಂತಲೂ ಮಹಾತರಂಗಗಳ ಗರ್ಜನೆಗಿಂತಲೂ ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಾಗರಗಳ ಗರ್ಜನೆಗಿಂತ I ಸಮುದ್ರ ತರಂಗಗಳಿಗಿಂತ I ಮಹೋನ್ನತ ಪ್ರಭು ಬಲವಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮಹಾಸಾಗರದ ಶಬ್ದಕ್ಕಿಂತಲೂ, ಸಮುದ್ರದ ಬಲವಾದ ಅಲೆಗಳಿಗಿಂತಲೂ ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:4
9 ತಿಳಿವುಗಳ ಹೋಲಿಕೆ  

ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ.


ಸಮುದ್ರದ ಅಲ್ಲಕಲ್ಲೋಲಗಳನ್ನು ಅಂಕೆಯಲ್ಲಿಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.


ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವದು ಎಂದು ಅಪ್ಪಣೆಕೊಟ್ಟೆನು.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು