Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವದಿಲ್ಲ; ತನ್ನ ಸ್ವಾಸ್ತ್ಯವನ್ನು ಕೈಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:14
19 ತಿಳಿವುಗಳ ಹೋಲಿಕೆ  

ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.


ಇಸ್ರಾಯೇಲ್ಯರು ಮಾತ್ರ ಯೆಹೋವನ ಸ್ವಂತ ಜನರಾದದ್ದೂ; ಯಾಕೋಬ್ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದದ್ದೂ;


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ?


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವಾಸ್ತ್ಯವನ್ನು ಕುಗ್ಗಿಸಿಬಿಡುತ್ತಾರೆ;


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವದಿಲ್ಲ, ತಾತ್ಸಾರಮಾಡುವದಿಲ್ಲ; ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವದಿಲ್ಲ; ಅವರನ್ನು ಇಲ್ಲದಂತೆ ಮಾಡುವದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.


ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡಿಸಿ ಸಂಪಾದಿಸಿಕೊಂಡ ನಿನ್ನ ಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್‍ಗಿರಿಯನ್ನು ಮರೆಯಬೇಡ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು