Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:18 - ಕನ್ನಡ ಸತ್ಯವೇದವು J.V. (BSI)

18 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:18
11 ತಿಳಿವುಗಳ ಹೋಲಿಕೆ  

ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗುವರಲ್ಲಾ ಅಂದುಕೊಂಡೆನು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಯಾಕೆ ಈ ತೈಲವನ್ನು ಮುನ್ನೂರು ಹಣಕ್ಕೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು